8-9 “ನನ್ನ ಒಡೆಯನಾದ ರಾಜನೇ, ಆ ಅಧಿಕಾರಿಗಳು ದುಷ್ಟ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಪ್ರವಾದಿಯಾದ ಯೆರೆಮೀಯನೊಂದಿಗೆ ದುಷ್ಟತನದಿಂದ ವ್ಯವಹರಿಸಿದ್ದಾರೆ. ಅವರು ಅವನನ್ನು ಒಂದು ಬಾವಿಯಲ್ಲಿ ಎಸೆದಿದ್ದಾರೆ. ಅವನನ್ನು ಅಲ್ಲಿಯೇ ಸಾಯಲು ಬಿಟ್ಟಿದ್ದಾರೆ” ಎಂದು ಹೇಳಿದನು.
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:
ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನ್ನು ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಹೀಗೆನ್ನುತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಬೂಕದ್ನೆಚ್ಚರನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.
ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.