ಯೆರೆಮೀಯ 39:1 - ಪರಿಶುದ್ದ ಬೈಬಲ್1 ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.