ಯೆರೆಮೀಯ 39:12 - ಪರಿಶುದ್ದ ಬೈಬಲ್12 “ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನ್ನೆಲ್ಲ ಕೊಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನನ್ನು ಕರೆಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು ಎಂದು ಅಪ್ಪಣೆಕೊಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.