Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:14 - ಪರಿಶುದ್ದ ಬೈಬಲ್‌

14 ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:14
18 ತಿಳಿವುಗಳ ಹೋಲಿಕೆ  

ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂದಿಯಾಗಿದ್ದಾಗ ಯೆಹೋವನಿಂದ ಅವನಿಗೊಂದು ಸಂದೇಶ ಬಂದಿತು. ಆ ಸಂದೇಶ ಹೀಗಿತ್ತು:


ಅವರು ಯೆರೆಮೀಯನನ್ನು ಹಗ್ಗದಿಂದ ಮೇಲಕ್ಕೆ ಎಳೆದು ಬಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ಅವನ ಪ್ರವಾದನೆಯು ನೆರವೇರುವ ತನಕ ಅವನು ಗುಲಾಮನಾಗಿದ್ದನು. ಯೋಸೇಫನು ಸತ್ಯವಂತನೆಂದು ಯೆಹೋವನ ಸಂದೇಶವು ನಿರೂಪಿಸಿತು.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಆ ಸಮಯದಲ್ಲಿ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನ್ನು ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.


ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನ್, ಬಾಬಿಲೋನಿನ ಸೈನ್ಯದ ಒಬ್ಬ ಮುಖ್ಯ ಅಧಿಕಾರಿಯಾದ ನೆಬೂಷಜ್ಜಾನ್, ದೊಡ್ಡ ಅಧಿಕಾರಿಯಾದ ನೇರ್ಗಲ್ ಸರೆಚರ್ ಮತ್ತು ಬಾಬಿಲೋನಿನ ಇನ್ನುಳಿದ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಹುಡುಕಲು ಜನರನ್ನು ಕಳುಹಿಸಿದರು.


ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ಆದರೆ ರಾಜನಾದ ಯೆಹೋಯಾಕೀಮನು ಎಲ್ನಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ನಾತಾನನು ಅಕ್ಬೋರನ ಮಗ.


ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು