ಯೆರೆಮೀಯ 39:2 - ಪರಿಶುದ್ದ ಬೈಬಲ್2 ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಚಿದ್ಕೀಯನ ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕುಬಿದ್ದು ಯೆರೂಸಲೇಮು ಶತ್ರುವಶವಾಗಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು. ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.