Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:4 - ಪರಿಶುದ್ದ ಬೈಬಲ್‌

4 ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದ ಅರಸನಾದ ಚಿದ್ಕೀಯನೂ ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:4
17 ತಿಳಿವುಗಳ ಹೋಲಿಕೆ  

ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.


ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.


ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರ. ಖಂಡಿತವಾಗಿಯೂ ಅವನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು. ಚಿದ್ಕೀಯನು ಮುಖಾಮುಖಿಯಾಗಿ ಬಾಬಿಲೋನಿನ ರಾಜನೊಂದಿಗೆ ಮಾತನಾಡುವನು. ಚಿದ್ಕೀಯನು ತನ್ನ ಕಣ್ಣುಗಳಿಂದ ಅವನನ್ನು ನೋಡುವನು.


“ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.


ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.


ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು