ಯೆರೆಮೀಯ 39:7 - ಪರಿಶುದ್ದ ಬೈಬಲ್7 ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು. ಅಧ್ಯಾಯವನ್ನು ನೋಡಿ |
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”