9 ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು.
ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.
ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”
ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.
ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.
ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.