ಯೆರೆಮೀಯ 4:1 - ಪರಿಶುದ್ದ ಬೈಬಲ್1 ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.