ಯೆರೆಮೀಯ 4:10 - ಪರಿಶುದ್ದ ಬೈಬಲ್10 ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು. ಅಧ್ಯಾಯವನ್ನು ನೋಡಿ |