ಯೆರೆಮೀಯ 4:11 - ಪರಿಶುದ್ದ ಬೈಬಲ್11 ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ. ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”