ಯೆರೆಮೀಯ 4:14 - ಪರಿಶುದ್ದ ಬೈಬಲ್14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು. ಅಧ್ಯಾಯವನ್ನು ನೋಡಿ |
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.