Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:16 - ಪರಿಶುದ್ದ ಬೈಬಲ್‌

16 “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ : ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:16
18 ತಿಳಿವುಗಳ ಹೋಲಿಕೆ  

“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಆದಕಾರಣ ಸರ್ವಜನಾಂಗಗಳೇ ಕೇಳಿರಿ, ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು