ಯೆರೆಮೀಯ 4:17 - ಪರಿಶುದ್ದ ಬೈಬಲ್17 ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.