Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:18 - ಪರಿಶುದ್ದ ಬೈಬಲ್‌

18 “ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:18
15 ತಿಳಿವುಗಳ ಹೋಲಿಕೆ  

ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.


ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”


“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


ಅವರು ಪಾಪ ಮಾಡಿ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಂಡರು. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆನು. ಅವರಿಂದ ನಾನು ದೂರವಾಗಿ ಅವರಿಗೆ ಸಹಾಯ ಮಾಡಲು ನಿರಾಕರಿಸಿದೆನು.”


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು