ಯೆರೆಮೀಯ 4:2 - ಪರಿಶುದ್ದ ಬೈಬಲ್2 ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.” ಅಧ್ಯಾಯವನ್ನು ನೋಡಿ |
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.