Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:20 - ಪರಿಶುದ್ದ ಬೈಬಲ್‌

20 ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಶನದ ಮೇಲೆ ನಾಶನವು, ಒಂದರ ಮೇಲೊಂದು ನಾಶನದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:20
29 ತಿಳಿವುಗಳ ಹೋಲಿಕೆ  

ಜಲಪಾತದ ಘೋಷದಂತೆಯೂ ಪ್ರವಾಹದ ಘರ್ಜನೆಯಂತೆಯೂ ಇಕ್ಕಟ್ಟುಗಳು ನನಗೆ ಬಂದಿವೆ. ಸಮುದ್ರದ ಅಲೆಗಳಂತೆ ದುಃಖವು ನನ್ನನ್ನು ಆವರಿಸಿಕೊಂಡಿದೆ.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಆಗ ನಾನು ಸಹ ನಿಮಗೆ ವಿರೋಧವಾಗಿ ನಡೆಯುವೆನು. ಹೌದು, ನಾನೇ ನಿಮ್ಮನ್ನು ನಿಮ್ಮ ಪಾಪಗಳಿಗಾಗಿ ಏಳರಷ್ಟಾಗಿ ದಂಡಿಸುವೆನು.


“ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ.


“ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.


ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.


ಕೂಷಾನಿನ ನಗರಗಳು ಸಂಕಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ಮನೆಗಳು ಹೆದರಿ ನಡುಗುತ್ತಿದ್ದವು.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


“ನಿನ್ನ ಡೇರೆಗಳನ್ನು ವಿಸ್ತರಿಸು. ನಿನ್ನ ಬಾಗಿಲುಗಳನ್ನು ಅಗಲವನ್ನಾಗಿ ಮಾಡು. ನಿನ್ನ ಮನೆಯನ್ನು ಅಭಿವೃದ್ಧಿಪಡಿಸು. ನಿನ್ನ ಡೇರೆಯನ್ನು ದೊಡ್ಡದಾಗಿಯೂ ಬಲವಾಗಿಯೂ ಮಾಡು.


ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.


ಆತನ ಪ್ರಭಾವಪೂರ್ಣವಾದ ಹೆಸರನ್ನು ಎಂದೆಂದಿಗೂ ಕೊಂಡಾಡಿರಿ! ಆತನ ಮಹಿಮೆ ಭೂಲೋಕವನ್ನೆಲ್ಲಾ ತುಂಬಿಕೊಳ್ಳಲಿ! ಆಮೆನ್, ಆಮೆನ್!


“ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.


“ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.


ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.


ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು?


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು