ಯೆರೆಮೀಯ 4:21 - ಪರಿಶುದ್ದ ಬೈಬಲ್21 ಯೆಹೋವನೇ, ಎಷ್ಟು ಹೊತ್ತಿನವರೆಗೆ ನಾನು ಯುದ್ಧ ಧ್ವಜಗಳನ್ನು ನೋಡಬೇಕು? ಎಷ್ಟು ಹೊತ್ತಿನವರೆಗೆ ನಾನು ಯುದ್ಧದ ತುತ್ತೂರಿಗಳ ಶಬ್ಧವನ್ನು ಕೇಳಬೇಕು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಎಷ್ಟರವರೆಗೆ ಧ್ವಜವನ್ನು ನೋಡಲಿ, ಎಂದಿನ ತನಕ ತುತೂರಿಯ ಶಬ್ದವನ್ನು ಕೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ? ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.