ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”