Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:5 - ಪರಿಶುದ್ದ ಬೈಬಲ್‌

5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:5
16 ತಿಳಿವುಗಳ ಹೋಲಿಕೆ  

“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಯೆಹೋಶುವನು ಮತ್ತು ಇಸ್ರೇಲಿನ ಜನರು ವೈರಿಗಳನ್ನು ಕೊಂದರು. ಆದರೆ ಕೆಲವು ಶತ್ರುಗಳು ಎತ್ತರವಾದ ಗೋಡೆಗಳುಳ್ಳ ತಮ್ಮ ಪಟ್ಟಣಗಳಿಗೆ ಹೋಗಿ ಅಡಗಿಕೊಳ್ಳಲು ಸಾಧ್ಯವಾಯಿತು. ಆ ಜನರು ಕೊಲ್ಲಲ್ಪಡಲಿಲ್ಲ.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಆದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.


“ಯೆರೆಮೀಯನೇ, ಈ ಒಡಂಬಡಿಕೆಯ ವಚನಗಳನ್ನು ಕೇಳು, ಈ ವಿಷಯಗಳ ಬಗ್ಗೆ ಯೆಹೂದದ ಜನರಿಗೂ ಜೆರುಸಲೇಮಿನಲ್ಲಿರುವ ಜನರಿಗೂ ಹೇಳು.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ಯೆಹೋವನು ಹೀಗೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಬನ ಜನಾಂಗದವರಿಗೆ ಸಾರಿರಿ. ಈ ಸಂದೇಶವನ್ನು ಯೆಹೂದ ಜನಾಂಗಕ್ಕೆ ಹೇಳಿರಿ:


ನೀನು ಎರಡು ತುತ್ತೂರಿಗಳನ್ನು ಲಘು ಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.


“ಅವರು ಜನರನ್ನು ಎಚ್ಚರಿಸುವುದಕ್ಕಾಗಿ ತುತ್ತೂರಿಯನ್ನು ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ.


ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


“ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.


ಆತನು ಬಂದು ನಿಮ್ಮನ್ನು ತೆಗೆದುಕೊಂಡು ಹೋಗುವನು. ನಿಮಗೆ ದೊರಕುವ ಶಿಕ್ಷೆ ಬಹು ಭಯಂಕರವಾದದ್ದು. ಅದರ ಬಗ್ಗೆ ನೀವು ಕೇಳಿದ ಕೂಡಲೇ ಚಿಂತಿಸಲಾರಂಭಿಸುವಿರಿ. ಅದು ಮುಂಜಾನೆ ಬಂದು ರಾತ್ರಿ ಬಹು ಹೊತ್ತಿನ ತನಕ ಇರುವದು. “ಆಗ ನೀವು ಈ ಕಥೆಯನ್ನು ಅರ್ಥಮಾಡಿಕೊಳ್ಳುವಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು