ಯೆರೆಮೀಯ 4:6 - ಪರಿಶುದ್ದ ಬೈಬಲ್6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.” ಅಧ್ಯಾಯವನ್ನು ನೋಡಿ |
“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.