ಯೆರೆಮೀಯ 4:7 - ಪರಿಶುದ್ದ ಬೈಬಲ್7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
“‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”