ಯೆರೆಮೀಯ 40:1 - ಪರಿಶುದ್ದ ಬೈಬಲ್1 ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇವಿುನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.