ಯೆರೆಮೀಯ 40:11 - ಪರಿಶುದ್ದ ಬೈಬಲ್11 ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.