Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:13 - ಪರಿಶುದ್ದ ಬೈಬಲ್‌

13 ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನ ಬಳಿಗೆ ಬಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ, ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಕಾರೇಹನ ಮಗನಾದ ಯೋಹಾನಾನನೂ ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:13
5 ತಿಳಿವುಗಳ ಹೋಲಿಕೆ  

ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು.


ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು