14 ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
14 ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
14 “ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ.
14 ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂಬದು ನಿನಗೆ ಗೊತ್ತಿದೆಯೋ ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
14 “ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಮಿಚ್ಫ ನಗರದಲ್ಲಿ ಉಳಿದೆಲ್ಲ ಜನರನ್ನು ಇಷ್ಮಾಯೇಲನು ವಶಪಡಿಸಿಕೊಂಡನು. ಅವರಲ್ಲಿ ರಾಜನ ಹೆಣ್ಣಮಕ್ಕಳು ಮತ್ತು ಅಲ್ಲಿದ್ದ ಬೇರೆ ಜನರೂ ಸೇರಿದ್ದರು. ಆ ಜನರನ್ನು ನೋಡಿಕೊಳ್ಳಲೆಂದು ನೆಬೂಜರದಾನನು ಗೆದಲ್ಯನನ್ನು ನೇಮಿಸಿದ್ದನು. ನೆಬೂಜರದಾನನು ಬಾಬೆಲಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಇಷ್ಮಾಯೇಲನು ಆ ಜನರನ್ನು ಸೆರೆಹಿಡಿದು ಅವರನ್ನು ತೆಗೆದುಕೊಂಡು ಅಮ್ಮೋನ್ಯರ ಸೀಮೆಗೆ ಹೊರಟನು.
ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.
ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.
ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.
ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.