ಯೆರೆಮೀಯ 40:15 - ಪರಿಶುದ್ದ ಬೈಬಲ್15 ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಕಾರೇಹನ ಮಗನಾದ ಯೋಹಾನಾನನು ವಿುಚ್ಪದಲ್ಲಿ ಗೆದಲ್ಯನಿಗೆ - ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವದಲ್ಲಾ; ಏಕೆ ಹೀಗಾಗಬೇಕು ಎಂದು ರಹಸ್ಯವಾಗಿ ವಿಜ್ಞಾಪಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.