ಯೆರೆಮೀಯ 40:3 - ಪರಿಶುದ್ದ ಬೈಬಲ್3 ಏನೇನು ಮಾಡುವೆನೆಂದು ಯೆಹೋವನು ಹೇಳಿದ್ದನೋ ಅದೆಲ್ಲವನ್ನು ಹೇಳಿದ್ದಂತೆಯೇ ಮಾಡಿದ್ದಾನೆ. ಯೆಹೂದದ ಜನರಾದ ನೀವುಗಳು ಯೆಹೋವನ ವಿರುದ್ಧ ಪಾಪ ಮಾಡಿದ್ದರಿಂದ ಈ ಕೇಡು ಸಂಭವಿಸಿತು. ನೀವು ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಶಾಪ ಈಡೇರುವಂತೆ ಮಾಡಿದ್ದಾನೆ. ನೀವು ಆತನ ವಾಣಿಗೆ ಕಿವಿಗೊಡದೆ ಪಾಪಮಾಡಿದ್ದರಿಂದ ಇದು ನಿಮಗೆ ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ. ಅಧ್ಯಾಯವನ್ನು ನೋಡಿ |
“ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.