ಯೆರೆಮೀಯ 40:4 - ಪರಿಶುದ್ದ ಬೈಬಲ್4 ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು. ಅಧ್ಯಾಯವನ್ನು ನೋಡಿ |