Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:5 - ಪರಿಶುದ್ದ ಬೈಬಲ್‌

5 ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:5
24 ತಿಳಿವುಗಳ ಹೋಲಿಕೆ  

ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.


ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.


ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.


ಯೆರೆಮೀಯನೇ, ನಾನು ಈಗ ನಿನ್ನನ್ನು ಬಿಡುಗಡೆ ಮಾಡುವೆನು. ನಾನು ನಿನ್ನ ಕೈಗಳಿಂದ ಸಂಕೋಲೆಗಳನ್ನು ಬಿಚ್ಚುವೆನು. ನೀನು ಇಷ್ಟಪಟ್ಟರೆ ನನ್ನ ಸಂಗಡ ಬಾಬಿಲೋನಿಗೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನಿನಗೆ ನನ್ನ ಸಂಗಡ ಬರುವ ಇಷ್ಟವಿಲ್ಲದಿದ್ದರೆ ಬರಬೇಡ. ಇಡೀ ದೇಶದಲ್ಲಿ ನಿನಗೆ ಎಲ್ಲಿ ಇಷ್ಟವೋ ಅಲ್ಲಿಗೆ ಹೋಗು.


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ದೇವರು ಅಹಂಕಾರಿಗಳನ್ನು ನಾಚಿಕೆಗೀಡುಮಾಡುವನು, ದೀನರಿಗಾದರೋ ಸಹಾಯಮಾಡುವನು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು