ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.
ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.
ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.