Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:8 - ಪರಿಶುದ್ದ ಬೈಬಲ್‌

8 ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ ನೆಟೋಫದವನಾದ ಏಫಯನ ಮಕ್ಕಳು ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಸೇನಾಪತಿಗಳು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು, ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:8
29 ತಿಳಿವುಗಳ ಹೋಲಿಕೆ  

ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.


ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.


ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ಬೆತ್ಲೆಹೇಮ್ ಮತ್ತು ನೆಟೋಫ ಊರಿನವರು 188


ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ಓಗನು ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಮತ್ತು ಬಾಷಾನಿನ ಎಲ್ಲ ಪ್ರದೇಶ, ಇವುಗಳನ್ನು ಆಳುತ್ತಿದ್ದನು. ಗೆಷೂರ್ಯರು ಮತ್ತು ಮಾಕತೀ ಜನರು ವಾಸಮಾಡುವ ಪ್ರದೇಶವು ಇವನ ರಾಜ್ಯದ ಮೇರೆಯಾಗಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯದ ಮೇರೆಯವರೆಗೆ ಹಬ್ಬಿದ ಗಿಲ್ಯಾದಿನ ಅರ್ಧಪ್ರಾಂತ್ಯವನ್ನು ಕೂಡ ಓಗನು ಆಳುತ್ತಿದ್ದನು.


ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಧಿಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಬಂದಿದ್ದರು.


ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.


ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.


ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ನೆಟೋಫದ ಮಹರೈ, ನೆಟೋಫದ ಬಾಣನ ಮಗನಾದ ಹೇಲೆದನು.


ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು.


ಮಾಕಳು ಕಾಲೇಬನ ಇನ್ನೊಬ್ಬ ದಾಸಿ. ಈಕೆ ಶೆಬೆರ್ ಮತ್ತು ತಿರ್ಹನ ಎಂಬವರ ತಾಯಿ.


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,


ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನ ಬಳಿಗೆ ಬಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.


ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”


ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ಇಷ್ಮಾಯೇಲನು ಮಾಡಿದ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು