Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:1 - ಪರಿಶುದ್ದ ಬೈಬಲ್‌

1 ಏಳನೇ ತಿಂಗಳಿನಲ್ಲಿ ನೆತನ್ಯನ ಮಗನೂ ಎಲೀಷಾಮನ ಮೊಮ್ಮಗನೂ ಆದ ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನಲ್ಲಿಗೆ ಬಂದನು. ಇಷ್ಮಾಯೇಲನು ತನ್ನ ಹತ್ತು ಮಂದಿಯೊಂದಿಗೆ ಬಂದನು. ಆ ಜನರು ಮಿಚ್ಫ ಪಟ್ಟಣಕ್ಕೆ ಬಂದರು. ಇಷ್ಮಾಯೇಲನು ರಾಜವಂಶೀಯನಾಗಿದ್ದನು. ಅವನು ಯೆಹೂದದ ರಾಜನ ಒಬ್ಬ ಅಧಿಕಾರಿಯಾಗಿದ್ದನು. ಇಷ್ಮಾಯೇಲ್ ಮತ್ತು ಅವನ ಜನರು ಗೆದಲ್ಯನೊಂದಿಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:1
25 ತಿಳಿವುಗಳ ಹೋಲಿಕೆ  

ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.


ಅನಂತರ ರಾಜಾಧಿಕಾರಿಗಳು ಆ ಸುರುಳಿಯನ್ನು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಲ್ಲಿ ಇಟ್ಟರು. ಅವರು ರಾಜನಾದ ಯೆಹೋಯಾಕೀಮನ ಬಳಿಗೆ ಹೋಗಿ ಆ ಸುರುಳಿಯ ಬಗ್ಗೆ ವಿವರವಾಗಿ ಹೇಳಿದರು.


ಸುರುಳಿಯಲ್ಲಿದ್ದ ಸಂದೇಶಗಳನ್ನು ಕೇಳಿದ ಕೂಡಲೇ ಅವನು ರಾಜನ ಅರಮನೆಯಲ್ಲಿದ್ದ ಆಸ್ಥಾನದ ಅಧಿಕಾರಿಯ ಕೋಣೆಗೆ ಹೋದನು. ರಾಜನ ಅರಮನೆಯಲ್ಲಿ ಎಲ್ಲಾ ರಾಜಾಧಿಕಾರಿಗಳು ಕುಳಿತುಕೊಂಡಿದ್ದರು. ಆ ಅಧಿಕಾರಿಗಳ ಹೆಸರುಗಳು ಇಂತಿವೆ: ದರ್ಬಾರಿನ ಅಧಿಕಾರಿಯಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಮತ್ತು ಉಳಿದೆಲ್ಲ ಅಧಿಕಾರಿಗಳು ಅಲ್ಲಿದ್ದರು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.


ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕದ ಕೂಡಲೇ ಆಕೆ ಯೆಹೂದದಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು.


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.


ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.


ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕಾಡುಮೇಡುಗಳಲ್ಲಿದ್ದ ಯೆಹೂದದ ಸೈನ್ಯಾಧಿಕಾರಿಗಳೂ ಗೆದಲ್ಯನ ಬಳಿಗೆ ಬಂದರು. ಗೆದಲ್ಯನು ಮಿಚ್ಫ ಪಟ್ಟಣದಲ್ಲಿದ್ದನು.


ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.


ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು