ಯೆರೆಮೀಯ 41:12 - ಪರಿಶುದ್ದ ಬೈಬಲ್12 ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಮ್ಮ ಸೈನಿಕರನ್ನೆಲ್ಲಾ ಕರಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು. ಅಧ್ಯಾಯವನ್ನು ನೋಡಿ |