Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:2 - ಪರಿಶುದ್ದ ಬೈಬಲ್‌

2 ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:2
12 ತಿಳಿವುಗಳ ಹೋಲಿಕೆ  

ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.


ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.


ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.


ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು.


ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನ್ನು ಕೊಲ್ಲಬೇಡ. ನೀನು ಇಷ್ಮಾಯೇಲನ ಬಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು