Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:3 - ಪರಿಶುದ್ದ ಬೈಬಲ್‌

3 ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:3
6 ತಿಳಿವುಗಳ ಹೋಲಿಕೆ  

ರಾತ್ರಿಯಲ್ಲಿ ಅವಳು ಬಿಕ್ಕಿಬಿಕ್ಕಿ ಅಳುತ್ತಾಳೆ. ಅವಳ ಕೆನ್ನೆಗಳ ಮೇಲೆ ಕಣ್ಣೀರು ಹರಿಯುತ್ತಿದೆ. ಅವಳನ್ನು ಸಂತೈಸುವವರು ಯಾರೂ ಇಲ್ಲ. ಅವಳ ಮಿತ್ರ ರಾಷ್ಟ್ರಗಳಲ್ಲಿ ಒಂದೂ ಕೂಡ ಅವಳನ್ನು ಸಂತೈಸುವುದಿಲ್ಲ. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ದ್ರೋಹ ಮಾಡಿದರು. ಅವಳ ಸ್ನೇಹಿತರೆಲ್ಲಾ ಅವಳಿಗೆ ಶತ್ರುಗಳಾದರು.


ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು