ಯೆರೆಮೀಯ 41:7 - ಪರಿಶುದ್ದ ಬೈಬಲ್7 ಆ ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನ್ನು ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಆ ಎಪ್ಪತ್ತು ಮಂದಿ ದೇಹಗಳನ್ನು ಒಂದು ಆಳವಾದ ಬಾವಿಯಲ್ಲಿ ಎಸೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಹತಿಸಿ ಬಾವಿಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು. ಅಧ್ಯಾಯವನ್ನು ನೋಡಿ |