Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:11 - ಪರಿಶುದ್ದ ಬೈಬಲ್‌

11 ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:11
25 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.


“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ಆ ಪ್ರವಾದಿಗಳ ಮಾತನ್ನು ಕೇಳಬೇಡಿ. ಬಾಬಿಲೋನಿನ ರಾಜನ ಸೇವೆಮಾಡಿರಿ. ದಂಡನೆಗಳನ್ನು ಸ್ವಿಕರಿಸಿರಿ, ಆಗ ನೀವು ಬದುಕುವಿರಿ. ನಿಷ್ಕಾರಣವಾಗಿ ಈ ಜೆರುಸಲೇಮ್ ನಗರವು ಹಾಳಾಗಬಾರದು.


ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬದುಕುವೆ.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ಇದಾದ ನಂತರ, ಕನಿಷ್ಠರಾದವರೂ ಮತ್ತು ಅತಿ ಮುಖ್ಯರೂ ಆದ ಜನರೆಲ್ಲರು ಮತ್ತು ಸೇನೆಯ ನಾಯಕರು ಬಾಬಿಲೋನಿನವರಿಗೆ ಹೆದರಿಕೊಂಡು ಈಜಿಪ್ಟಿಗೆ ಓಡಿಹೋದರು.


ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


“‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು