ಯೆರೆಮೀಯ 42:18 - ಪರಿಶುದ್ದ ಬೈಬಲ್18 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’ ಅಧ್ಯಾಯವನ್ನು ನೋಡಿ |
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.