ಯೆರೆಮೀಯ 42:19 - ಪರಿಶುದ್ದ ಬೈಬಲ್19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ. ಅಧ್ಯಾಯವನ್ನು ನೋಡಿ |