ಯೆರೆಮೀಯ 42:21 - ಪರಿಶುದ್ದ ಬೈಬಲ್21 ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿ |