Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:22 - ಪರಿಶುದ್ದ ಬೈಬಲ್‌

22 ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:22
10 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: “ಚಪ್ಪಾಳೆ ತಟ್ಟು, ನಿನ್ನ ಕಾಲುಗಳನ್ನು ನೆಲಕ್ಕೆ ಒದ್ದು, ‘ಅಯ್ಯೋ, ಬೇಡ!’ ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ಅಡಗಿಕೊಂಡರೆ ಏನೂ ಪ್ರಯೋಜನವಾಗದು. ಈಜಿಪ್ಟು ನಿಮ್ಮನ್ನು ರಕ್ಷಿಸಲಾರದು.


ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.


“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”


ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು