ಯೆರೆಮೀಯ 42:4 - ಪರಿಶುದ್ದ ಬೈಬಲ್4 ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ - ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಮುಚ್ಚದೆ ನಿಮಗೆ ತಿಳಿಸುವೆನು ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |