ಯೆರೆಮೀಯ 42:5 - ಪರಿಶುದ್ದ ಬೈಬಲ್5 ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ, ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.