ಯೆರೆಮೀಯ 42:8 - ಪರಿಶುದ್ದ ಬೈಬಲ್8 ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಆತ ಕಾರೇಹನ ಮಗನಾದ ಯೋಹಾನಾನನ್ನು, ಅವನೊಂದಿಗಿದ್ದ ಸೇನಾಪತಿಗಳೆಲ್ಲರನ್ನು ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರನ್ನು ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಕಲ ಸೇನಾಪತಿಗಳನ್ನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು, ಅಧ್ಯಾಯವನ್ನು ನೋಡಿ |