Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:12 - ಪರಿಶುದ್ದ ಬೈಬಲ್‌

12 ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:12
36 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.


ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


“ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.


ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: “ಬಹುಬೇಗನೆ ನಾನು ಥೀಬಸ್ಸಿನ ಆಮೋನ್ ದೇವತೆಯನ್ನು ದಂಡಿಸುವೆನು. ನಾನು ಫರೋಹನನ್ನು, ಈಜಿಪ್ಟನ್ನು ಮತ್ತು ಅವಳ ದೇವರುಗಳನ್ನು ದಂಡಿಸುವೆನು. ನಾನು ಈಜಿಪ್ಟಿನ ರಾಜರನ್ನು ದಂಡಿಸುವೆನು. ಫರೋಹನನ್ನು ನಂಬಿದವರನ್ನು ದಂಡಿಸುವೆನು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೋ.


ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.


ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು.


ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.


“ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.


ಅವರು ಯೆಹೋವನಿಗೆ ಭಯಪಡುವರು. ಯಾಕೆಂದರೆ ಆತನು ಅವರ ದೇವರುಗಳನ್ನು ನಾಶಮಾಡಿದ್ದಾನೆ. ಆಗ ದೂರದಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸುವರು.


ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಆಗ ನಿಮ್ಮ ವೈರಿಗಳು ನಿಮ್ಮ ಬಳಿಗೆ ಬಂದು ನಿಮ್ಮ ಕುರಿಮಂದೆಯನ್ನು ಮೇಯಿಸುವರು. ನಿಮ್ಮ ವೈರಿಗಳ ಮಕ್ಕಳು ನಿಮ್ಮ ಹೊಲಗದ್ದೆಗಳಲ್ಲಿಯೂ ತೋಟಗಳಲ್ಲಿಯೂ ಕೆಲಸ ಮಾಡುವರು.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.


ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.


ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು.


ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.


ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’”


“ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.”


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು