Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:2 - ಪರಿಶುದ್ದ ಬೈಬಲ್‌

2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:2
31 ತಿಳಿವುಗಳ ಹೋಲಿಕೆ  

ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.


ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.


ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.


ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ಇಷ್ಮಾಯೇಲನು ಗೆದಲ್ಯನನ್ನು ಕೊಂದು ಮಿಚ್ಫದಲ್ಲಿ ಸೆರೆಹಿಡಿದ ಬಂದಿಗಳನ್ನು ಕಾರೇಹನ ಮಗನಾದ ಯೋಹಾನಾನನು ಮತ್ತು ಅವನ ಸೇನಾಪತಿಗಳು ರಕ್ಷಿಸಿದರು. ಆಗ ಉಳಿದುಕೊಂಡವರಲ್ಲಿ ಸೈನಿಕರು, ಹೆಂಗಸರು, ಮಕ್ಕಳು ಮತ್ತು ಅಧಿಕಾರಿಗಳು ಸೇರಿದ್ದರು. ಯೋಹಾನಾನನು ಗಿಬ್ಯೋನಿನಿಂದ ಅವರನ್ನು ಹಿಂದಕ್ಕೆ ಕರೆತಂದನು.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.


ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.


ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.


ಆದರೂ ನೀನು ನನ್ನ ಜನರಿಗೆ ವಿರುದ್ಧವಾಗಿರುವೆ; ಅವರಿಗೆ ಸ್ವತಂತ್ರವನ್ನು ಕೊಡದಿರುವೆ.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು.


ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.


“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು