3 ಯೆರೆಮೀಯನೇ, ನೀನು ನಮ್ಮ ವಿರುದ್ಧವಾಗಿರುವಂತೆ ನೇರೀಯನ ಮಗನಾದ ಬಾರೂಕನು ಪ್ರೋತ್ಸಾಹಿಸುತ್ತಿದ್ದಾನೆ ಎಂಬುದು ನಮ್ಮ ಆಲೋಚನೆ. ಅವನು ನಮ್ಮನ್ನು ಬಾಬಿಲೋನಿನ ಜನರ ಕೈಗೆ ಕೊಟ್ಟು ಅವರಿಂದ ಕೊಲ್ಲಿಸಬಯಸುತ್ತಾನೆ ಅಥವಾ ಅವರು ನಮ್ಮನ್ನು ಸೆರೆಹಿಡಿದು ಬಾಬಿಲೋನಿಗೆ ಕೊಂಡೊಯ್ಯುವಂತೆ ಮಾಡಬಯಸುತ್ತಾನೆಂದು ತೋರುತ್ತದೆ” ಎಂದು ಹೇಳಿದರು.
3 ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.
3 ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.
3 ಕಸ್ದೀಯರು ನಮ್ಮನ್ನು ಕೊಲ್ಲುವದಕ್ಕೋ ಬಾಬೆಲಿಗೆ ಸೆರೆ ಒಯ್ಯುವದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ ಎಂದು ಹೇಳಿದರು.
3 ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.
ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.
ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.
ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.
ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.