Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:8 - ಪರಿಶುದ್ದ ಬೈಬಲ್‌

8 ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:8
11 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ.


ನಾನು ನಿನ್ನ ಆತ್ಮದಿಂದ ತಪ್ಪಿಸಿಕೊಳ್ಳಲು ಎಲ್ಲಿಗೆ ಓಡಿಹೋಗಲಿ! ನಿನ್ನ ಕಣ್ಣಿಗೆ ಮರೆಯಾಗಲು ಎಲ್ಲಿಗೆ ಹೋಗಲಿ?


“ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು.


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:


ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ಸೆರೆಹಿಡಿದ ಹನ್ನೆರಡನೇ ವರ್ಷದ, ಹನ್ನೆರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು