ಯೆರೆಮೀಯ 43:9 - ಪರಿಶುದ್ದ ಬೈಬಲ್9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ: ಅಧ್ಯಾಯವನ್ನು ನೋಡಿ |
ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”